ಉಚಿತ ಹೊಲಿಗೆ ಯಂತ್ರ ಯೋಜನೆ, ಅರ್ಜಿ ಸಲ್ಲಿಸಿ | Free Sewing Machine By PM Modi Govt

ಎಲ್ಲರಿಗೂ ನಮಸ್ಕಾರ, ಕೇಂದ್ರ ಸರ್ಕಾರದಿಂದ ನೀಡಲಾಗುವ ಉಚಿತ ಹೊಲಿಗೆ ಯಂತ್ರ (Free Sewing Machine) ಯೋಜನೆಯ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ, ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಹೌದು ಸ್ನೇಹಿತರೇ, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲು ಉಚಿತ ಹೊಲಿಗೆ ಯಂತ್ರ ಮತ್ತು ಇತರೆ ಯಂತ್ರಗಳನ್ನು ನೀಡಲಾಗುತ್ತದೆ.

Free Sewing Machine ಯೋಜನೆ ಮಾಹಿತಿ:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಶ್ವಕರ್ಮ (PM Vishwakarma Scheme) ಯೋಜನೆಯ ಅಡಿಯಲ್ಲಿ ಸಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡಲು ಅರ್ಹ ಕುಶಲಕರ್ಮಿಗಳಿಗೆ ವಿಶೇಷ ತರಬೇತಿ ನೀಡಲಾಗಿತ್ತದೆ.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್‌ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ. ಅದರಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಒಂದಾಗಿದೆ.

ಅರ್ಹ ಫಲಾನುಭವಿಗಳಿಗೆ ಟೂಲ್‌ ಕಿಟ್‌ (Free Sewing Machine) ಖರೀದಿ ಮಾಡಲು ಈ ಯೋಜನೆಯಡಿ 15,000 ರೂ. ವರೆಗೆ ಮೌಲ್ಯದ ಇ–ವೋಚರ್ಸ್‌ ಅಥವಾ ಇ–ರುಪಿ ನೀಡುತ್ತಾರೆ. ಸರ್ಕಾರದ ಪರವಾಗಿ ಈ ಪ್ರೋತ್ಸಾಹಧನದ ವೋಚರ್ಸ್‌ಗಳನ್ನು ಬ್ಯಾಂಕ್‌ ಮೂಲಕ ವಿತರಣೆ ಮಾಡಲಾಗುತ್ತದೆ

PM Vishwakarma ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ತರಬೇತಿ ನೀಡಲಾಗುತ್ತದೆ.

ಅರ್ಹತೆಗಳು:

  • ಅರ್ಜಿ ಸಲ್ಲಿಸುವ ದಿನಾಂಕದಂದು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.
  • ಅರ್ಜಿದಾರ ತನ್ನ ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ (Tailor-Darzi) ದಲ್ಲಿ ತೊಡಗಿಕೊಂಡಿರಬೇಕು.
  • ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
  • ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆದಿರಬಾರದು. (e.g. PMEGP, PM SVANidhi, Mudra)
  • ಈ ಯೋಜನೆಯು ಸರ್ಕಾರಿ ನೌರಕರಿಗೆ ಮತ್ತು ಅವರ ಕುಟುಂಬದವರಿಗೆ ಸಿಗುವುದಿಲ್ಲ.

ಬೇಕಾಗುವ ದಾಖಲೆಗಳು:

  • ಆಧಾರ ಕಾರ್ಡ್‌
  • ರೇಷನ್‌ ಕಾರ್ಡ್‌ ಕಡ್ಡಾಯ
  • ಮೊಬೈಲ್‌ ಸಂಖ್ಯೆ
  • ಬ್ಯಾಂಕ್‌ ಖಾತೆ ವಿವರ

ಅರ್ಜಿ ಸಲ್ಲಿಸುವ ವಿಧಾನ:

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಬಸುವವರು ಕೇಂದ್ರ ಸರ್ಕಾರದ PM Vishwakarma ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಗ್ರಾಮ ಪಂಚಾಯತಿ, ನಿಮ್ಮ ಹತ್ತಿರದ CSC ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯು ಅರ್ಜಿ ಸಲ್ಲಿಸಬಹುದು.

Free Sewing Machine ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್:‌ pmvishwakarma.gov.in

Basavaraj

I'm the founder and writer of Spardha Kranti, an educational platform started in 2021. With 5+ years of experience, I provide accurate job alerts, current affairs, and PDF study materials for competitive exam aspirants.

Post a Comment

Previous Post Next Post

Ad 1

Ad2

Telegram Group Join Now
WhatsApp Group Join Now